ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ
ಬಾಗಲಕೋಟೆ(Bagalakote) ಜಿಲ್ಲೆಯ ಬಾದಾಮಿಯಲ್ಲಿ ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನ್ನು ಜ್ಯುವೆಲ್ಲರಿ ಶಾಫ್ಗೆ ಬಂದು ಆನಂದ್ನನ್ನು ಕರೆದೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗಲಕೋಟೆ, ಏ.19: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ(Bagalakote) ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದವರು. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಹಿನ್ನಲೆ ಪಕ್ಕಕ್ಕೆ ನಿಲ್ಲಿಸಿ ಎಂದ ಹಿನ್ನಲೆ ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಸಹೋದರರು ಸ್ಥಳೀಯ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದು ವಾಪಾಸ್ಸಾಗಿದ್ದಾರೆ. ಇನ್ನು ಜ್ಯುವೆಲ್ಲರಿ ಶಾಫ್ಗೆ ಬಂದು ಆನಂದ್ನನ್ನು ಕರೆದೊಯ್ಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ