ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು
ಇತ್ತೀಚೆಗೆ ಮೊಬೈಲ್ ಕಳ್ಳತನ ಜಾಸ್ತಿಯಾಗಿದೆ. ಎಷ್ಟೇ ಜಾಗರೂಕರಾಗಿದ್ದರೂ ಕೂಡ ಕ್ಷಣಾರ್ಧದಲ್ಲಿ ಈ ಮೊಬೈಲ್ ಕಳ್ಳರ ಗ್ಯಾಂಗ್ ನಿಮ್ಮ ಫೋನ್ಗಳನ್ನು ಎಗರಿಸಿ ಬಿಡುತ್ತಾರೆ. ಅದರಂತೆ ಇಂದು(ಮೇ.11) ಉಡುಪಿ (Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ.
ಉಡುಪಿ, ಮೇ,11: ಉಡುಪಿ(Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಕದಿಯಲು ಬಂದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಖತರ್ನಾಕ್ ಮೊಬೈಲ್ ಕಳ್ಳತನ ಗ್ಯಾಂಗ್ನಲ್ಲಿದ್ದ ಇಬ್ಬರು ಕಳ್ಳಿಯರು ಸ್ಥಳದಿಂದ ಎಸ್ಕೇಪ್ ಆಗಿದ್ದು, ಬಸ್ ಹತ್ತುವ ವೇಳೆ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ್ದರು. ಇನ್ನು ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಬಳಿಕ ಆಕೆಯನ್ನು ಸಾರ್ವಜನಿಕರು ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

