ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು

Edited By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 4:37 PM

ಇತ್ತೀಚೆಗೆ ಮೊಬೈಲ್​ ಕಳ್ಳತನ ಜಾಸ್ತಿಯಾಗಿದೆ. ಎಷ್ಟೇ ಜಾಗರೂಕರಾಗಿದ್ದರೂ ಕೂಡ ಕ್ಷಣಾರ್ಧದಲ್ಲಿ ಈ ಮೊಬೈಲ್​ ಕಳ್ಳರ ಗ್ಯಾಂಗ್​ ನಿಮ್ಮ ಫೋನ್​ಗಳನ್ನು ಎಗರಿಸಿ ಬಿಡುತ್ತಾರೆ. ಅದರಂತೆ ಇಂದು(ಮೇ.11) ಉಡುಪಿ (Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ.

ಉಡುಪಿ, ಮೇ,11: ಉಡುಪಿ(Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಕದಿಯಲು ಬಂದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಖತರ್ನಾಕ್ ಮೊಬೈಲ್ ಕಳ್ಳತನ ಗ್ಯಾಂಗ್​ನಲ್ಲಿದ್ದ ಇಬ್ಬರು ಕಳ್ಳಿಯರು ಸ್ಥಳದಿಂದ ಎಸ್ಕೇಪ್ ಆಗಿದ್ದು, ಬಸ್ ಹತ್ತುವ ವೇಳೆ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ್ದರು. ಇನ್ನು ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಬಳಿಕ ಆಕೆಯನ್ನು ಸಾರ್ವಜನಿಕರು ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More