Narendra Modi: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಯುವಕರ ಪಾದಯಾತ್ರೆ

Narendra Modi: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಯುವಕರ ಪಾದಯಾತ್ರೆ

ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on:Apr 17, 2024 | 11:52 AM

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಧಾನಿ ಮೋದಿ ಪರ ಅಭಿಮಾನಿಗಳ ಪ್ರಾರ್ಥನೆ, ಹಾರೈಕೆ, ಪೂಜೆ ಪುನಸ್ಕಾರಗಳು ಹೆಚ್ಚಾಗಿವೆ. ತಮ್ಮ ನೆಚ್ಚಿನ ನಾಯಕ ಮತ್ತೆ ಪ್ರಧಾನಿಯಾಗಲೆಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ರಾಜಕೀಯ ಮುಖಂಡರು ಹಲವು ರೀತಿಯ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ. ಈ ಮಧ್ಯೆ, ಚಾಮರಾಜನಗರದ ಯುವಕರ ತಂಡವೊಂದು ಮೋದಿ ಮತ್ತೆ ಪ್ರಧಾನಿಯಾಗಲೆಂದು ಹರಕೆ ಹೊತ್ತು ಮಲೆ ಮಹದೇಶ್ವರನ ಸನ್ನಿಧಿಗೆ ಪಾದಯಾತ್ರೆ ನಡೆಸಿದೆ. ಪಾದಯಾತ್ರೆಯ ವಿಡಿಯೋ ಇಲ್ಲಿದೆ.

ಚಾಮರಾಜನಗರ, ಏಪ್ರಿಲ್ 17: ಪ್ರಧಾನಿ ನರೇಂದ್ರ ಮೋದಿ  (Narendra Modi) ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಲೆಂದು ಹರಕೆ ಹೊತ್ತು ಯುವಕರ ತಂಡವೊಂದು ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Temple) ಪಾದಯಾತ್ರೆ ನಡೆಸಿದೆ. ಚಾಮರಾಜನಗರ ತಾಲೂಕು ಕುದೇರು ಗ್ರಾಮದ ಯುವಕರು ಪಾದಯಾತ್ರೆ ನಡೆಸಿದ್ದಾರೆ. ಸುಮಾರು 120 ಕಿಲೋ ಮೀಟರ್ ದೂರ ಮಾದಪ್ಪನ ಸನ್ನಿಧಿಗೆ ಕಾಲ್ನಡಿಗೆಯಲ್ಲಿ ಹೊರಟ ಯುವಕರು, ದಾರಿಯುದ್ದಕ್ಕೂ ಮೋದಿ ಪರ ಜಯಕಾರ ಹಾಕಿದರು. ಮೈಸೂರಿಗೆ ಮಹಾರಾಜ, ಚಾಮರಾಜನಗರಕ್ಕೆ ಬಾಲರಾಜ ಎಂಬ ಘೋಷಣೆ ಯುವಕರಿಂದ ಕೇಳಿಬಂತು.

ಮುಂದುವರಿದು, ಪ್ರಧಾನಿ ಮೋದಿಗೆ ಜಯವಾಗಲಿ, ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನೂ ಯುವಕರು ಕೂಗಿದರು.

ಇದನ್ನೂ ಓದಿ: ವಿಡಿಯೋ ನೋಡಿ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆ ಪಾದಯಾತ್ರೆ

ಮೋದಿ ಮತ್ತೆ ಪ್ರಧಾನಿಯಾಗಲೆಂದು ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ರಾಜ್ಯ ನಾನಾ ಕಡೆಗಳಲ್ಲಿ ವಿವಿಧ ದೇಗುಲಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಿದ್ದಾರೆ. ಇತ್ತಿಚೆಗೆ ತುಮಕೂರಿನ ತಿಪಟೂರು ಮೂಲದ 102 ವರ್ಷದ ವೃದ್ಧೆ ಪಾರ್ವತಮ್ಮ ಮೋದಿ ಮತ್ತೆ ಪ್ರಧಾನಿಯಾಗಲೆಂದು ಹಾರೈಸಿ 18 ಕಿಲೋಮೀಟರ್ ಕಾಲ್ನಡಿಗೆ ಮೂಲಕ ಮಲೆ ಮಹದೇಶ್ವರ ಸನ್ನಿಧಿಗೆ ತೆರಳಿದ್ದರು. ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಸಹ ಯಾತ್ರಿಗಳಲ್ಲಿ ಅಜ್ಜಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Apr 17, 2024 11:52 AM