ಟ್ಯಾಪ್ ವಾಟರ್ ಮೇಲೂ ಆರೋಗ್ಯ ಇಲಾಖೆ ಹದ್ದಿನ ಕಣ್ಣು: ಪ್ಲಾಸ್ಟಿಕ್ ಬಾಟಲ್ ನೀರು ಬಳಕೆಗೆ ಬರಲಿದೆ ಮಾರ್ಗಸೂಚಿ

Edited By:

Updated on: Nov 03, 2026 | 6:17 AM

ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ನಡೆಸಿ ಲೋಪಗಳನ್ನು ಪತ್ತೆ ಹಚ್ಚಿದ ನಂತರ, ಆರೋಗ್ಯ ಇಲಾಖೆಯು ಇದೀಗ ಮನೆಗಳಿಗೆ ಪೂರೈಕೆಯಾಗುವ ಟ್ಯಾಪ್ ನೀರಿನ ಗುಣಮಟ್ಟ ಪರೀಕ್ಷೆಗೆ ಮುಂದಾಗಿದೆ. ಜೊತೆಗೆ, ಪ್ಲಾಸ್ಟಿಕ್ ಬಾಟಲಿಗಳ ಬಳಕೆಗೆ ಹೊಸ ಮಾರ್ಗಸೂಚಿ ರೂಪಿಸಲಿದೆ. ಪ್ಲಾಸ್ಟಿಕ್ ಪ್ಯಾಕಿಂಗ್ ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 3: ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದ ಕೆಲವು ಪ್ಯಾಕೇಜ್ಡ್ ಕುಡಿಯುವ ನೀರಿನ ಕಂಪನಿಗಳಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದೆ. ಇತ್ತೀಚೆಗೆ ರಾಜ್ಯಾದ್ಯಂತ ಬೃಹತ್ ದಾಳಿ ನಡೆಸಿದ ಇಲಾಖೆಯು, 102 ನೀರಿನ ಘಟಕಗಳನ್ನು ಪರಿಶೀಲಿಸಿ 69 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದೆ. ಈ ತಪಾಸಣೆಯಲ್ಲಿ ಲೈಸೆನ್ಸ್ ಇಲ್ಲದಿರುವುದು, ಲೇಬಲಿಂಗ್ ದೋಷ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಪರಿಣಾಮವಾಗಿ, 53 ಘಟಕಗಳಿಗೆ ನೋಟಿಸ್ ಜಾರಿಗೊಳಿಸಿ 12 ಘಟಕಗಳಿಗೆ ಬೀಗ ಹಾಕಲಾಗಿದೆ.

ಈ ಕಾರ್ಯಾಚರಣೆಯ ಬೆನ್ನಲ್ಲೇ, ಆರೋಗ್ಯ ಇಲಾಖೆಯು ಇದೀಗ ಮನೆ ಮನೆಗೆ ಪೂರೈಕೆಯಾಗುವ ಟ್ಯಾಪ್ ನೀರಿನ ಗುಣಮಟ್ಟದ ಮೇಲೂ ಹದ್ದಿನ ಕಣ್ಣಿಟ್ಟಿದೆ. ಜಲಮಂಡಳಿಯಿಂದ ಬರುವ ನೀರಿನಲ್ಲಿ ಬ್ಯಾಕ್ಟೀರಿಯಾ ಅಥವಾ ಇತರ ಹಾನಿಕಾರಕ ಅಂಶಗಳಿವೆಯೇ ಎಂಬುದನ್ನು ಪರಿಶೀಲಿಸಲು ಇಲಾಖೆ ಸಜ್ಜಾಗಿದೆ. ಅಲ್ಲದೆ, ಪ್ಯಾಕೇಜ್ಡ್ ಕುಡಿಯುವ ನೀರಿನ ಬಾಟಲಿಗಳ ಬಳಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಇಲಾಖೆ ಮುಂದಾಗಿದೆ.

ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಪ್ಯಾಕ್ ಆಗುವ ನೀರು ಅಥವಾ ಆಹಾರ ಪದಾರ್ಥಗಳು ಹೀಟ್‌ಗೆ ಒಡ್ಡಿದಾಗ ಪ್ಲಾಸ್ಟಿಕ್ ಅಂಶಗಳು ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕಲಬೆರಕೆಕೋರರ ವಿರುದ್ಧ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ಇಲಾಖೆ ಬದ್ಧವಾಗಿದೆ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More