AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಮತ್ತು ವಿರೋಧ ಪಕ್ಷಗಳ ಆಕ್ರೋಶದ ಎಫೆಕ್ಟ್​​: ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?

ಸಾರ್ವಜನಿಕ ಮತ್ತು ವಿರೋಧ ಪಕ್ಷಗಳ ಆಕ್ರೋಶದ ಎಫೆಕ್ಟ್​​: ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?

ಪ್ರಸನ್ನ ಗಾಂವ್ಕರ್​
| Edited By: |

Updated on: Sep 03, 2026 | 1:14 PM

Share

ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ಆಕ್ರೋಶದ ನಂತರ ಕರ್ನಾಟಕ ಉದ್ಯಾನವನ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯುವ ಸಾಧ್ಯತೆಯಿದೆ. ಹೈಕಮಾಂಡ್‌ನಿಂದಲೂ ವಿರೋಧ ವ್ಯಕ್ತವಾಗಿದ್ದು, ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಬೆಂಗಳೂರಿನ ಉದ್ಯಾನವನಗಳ ರಕ್ಷಣೆಗೆ ಆಗ್ರಹಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿಂದೆ ಗದ್ದಲದ ನಡುವೆ ವಿಧೇಯಕವನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿತ್ತು.

ಬೆಂಗಳೂರು, ಸೆಪ್ಟೆಂಬರ್​​ 03: ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಂತರ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ ಇದೆ. ಈ ವಿಚಾರವಾಗಿ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ವಿರೋಧ ವ್ಯಕ್ತವಾಗಿದೆ. ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಈ ವಿಧೇಯಕವನ್ನು ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ.ಕಳೆದ ಅಧಿವೇಶನದಲ್ಲಿ ತರಾತುರಿಯಲ್ಲಿ ಅಂಗೀಕರಿಸಲಾಗಿದ್ದ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್‌ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರ ಪ್ರಮುಖ ಆತಂಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯುವ ಸರ್ಕಾರದ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More