ಪೊಲೀಸ್ ಕಾನ್​ಸ್ಟೇಬಲ್ ನೇಮಕಾತಿ: ವಯೋಮಿತಿ ಸಡಿಲಿಕೆ ಬಗ್ಗೆ ಸುಳಿವು ಕೊಟ್ಟ ಗೃಹ ಸಚಿವ ಪರಮೇಶ್ವರ್

Updated on: Sep 12, 2025 | 12:27 PM

ಕರ್ನಾಟಕದ ಗೃಹ ಸಚಿವ ಪರಮೇಶ್ವರ್ ಅವರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಹಲವು ವರ್ಷಗಳಿಂದ ಕಾನ್ಸ್ಟೇಬಲ್ ನೇಮಕಾತಿ ಆಗದಿರುವುದರಿಂದ ಈ ಬೇಡಿಕೆ ಬಂದಿದೆ. ವಿವಿಧ ರಾಜ್ಯಗಳ ನೀತಿಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 12: ಪೊಲೀಸ್ ಕಾನ್​ಸ್ಟೇಬಲ್ ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಶುಭ ಸುದ್ದಿ ನೀಡುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆದಿಲ್ಲದ ಕಾರಣ, ಯುವಜನರಲ್ಲಿ ಈ ಬಗ್ಗೆ ಬಹಳಷ್ಟು ಆಕ್ರೋಶವಿತ್ತು. ಈ ಹಿನ್ನೆಲೆಯಲ್ಲಿ, ವಯೋಮಿತಿಯನ್ನು ಸಡಿಲಿಸುವ ಬಗ್ಗೆ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬೇರೆ ರಾಜ್ಯಗಳಲ್ಲಿರುವ ವಯೋಮಿತಿ ನೀತಿಗಳನ್ನು ಅಧ್ಯಯನ ಮಾಡಿ, ಸೂಕ್ತವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರಸ್ತಾವನೆ ಸರ್ಕಾರದ ಅನುಮೋದನೆ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More