AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಭಾವನಾ ಹೆಗಡೆ
|

Updated on: May 28, 2026 | 11:49 AM

Share

ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ 'ಬ್ರೇಕ್​ಫಾಸ್ಟ್​ ಮೀಟಿಂಗ್'ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.

ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವುದು ಬಹುತೇಕ ಖಚಿತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More