ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ: ಪ್ರಮುಖ ಕಾರಣ ಇಲ್ಲಿದೆ

Edited By:

Updated on: Sep 09, 2026 | 3:33 PM

ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ತಾಂತ್ರಿಕವಾಗಿರುವುದಕ್ಕಿಂತ ಹೆಚ್ಚಾಗಿ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ನ ಪ್ರಬಲ ಎಸ್‌ಟಿ ನಾಯಕರಾದ ಜಾರಕಿಹೊಳಿ, ಅಹಿಂದ ವರ್ಗವನ್ನು ಒಗ್ಗೂಡಿಸಿ, ಸಿದ್ದರಾಮಯ್ಯ ನಂತರದ ನಾಯಕತ್ವ ವಹಿಸುವ ಪ್ರಯತ್ನದಲ್ಲಿದ್ದಾರೆ. ಇದು ಬಿಜೆಪಿ ಪಕ್ಷಕ್ಕೆ ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ದೊಡ್ಡ ಮಟ್ಟದ ಆತಂಕವನ್ನು ಸೃಷ್ಟಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬೆಂಗಳೂರು, ಸೆಪ್ಟೆಂಬರ್​​ 09: ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ದಾಳಿಯನ್ನು ಕೇವಲ ತಾಂತ್ರಿಕ ಪ್ರಕ್ರಿಯೆಯಾಗಿ ನೋಡದೆ, ರಾಜಕೀಯವಾಗಿ ಮಹತ್ವಪೂರ್ಣ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್‌ನ ಪ್ರಮುಖ ಎಸ್‌ಟಿ ನಾಯಕರಲ್ಲಿ ಒಬ್ಬರಾಗಿರುವ ಸತೀಶ್ ಜಾರಕಿಹೊಳಿ, ಎಸ್‌ಟಿ ಶಾಸಕರ ಮೇಲೆ ಪ್ರಭಾವ ಹೊಂದಿದ್ದಾರೆ. ಸಿದ್ದರಾಮಯ್ಯನವರು ಚುನಾವಣಾ ರಾಜಕಾರಣದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ, ಅಹಿಂದ ವರ್ಗದ ಮುಂದಿನ ನಾಯಕ ಯಾರು ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಅವರ ಹೆಸರು ಪದೇ ಪದೇ ಮುನ್ನೆಲೆಗೆ ಬರುತ್ತಿದೆ. 2023ರ ಚುನಾವಣೆಯಲ್ಲಿ ಬಿಜೆಪಿ 14 ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಒಂದನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. ಇದಕ್ಕೆ ಸತೀಶ್ ಜಾರಕಿಹೊಳಿ ಅವರ ಪ್ರಭಾವ ಪ್ರಮುಖ ಕಾರಣ ಎಂಬ ಅಭಿಪ್ರಾಯವಿದೆ. ಮುಂದಿನ ದಿನಗಳಲ್ಲಿ ಜಾರಕಿಹೊಳಿ ದೊಡ್ಡ ಮಟ್ಟದ ಅಹಿಂದ ನಾಯಕರಾಗಿ ಹೊರಹೊಮ್ಮಿದರೆ, ಬಿಜೆಪಿಯ ದೊಡ್ಡ ಮತ ಬ್ಯಾಂಕ್ ಕೈತಪ್ಪಿ ಕಾಂಗ್ರೆಸ್‌ ಪಾಲಾಗಬಹುದು ಎಂಬ ಆತಂಕ ಬಿಜೆಪಿಯನ್ನು ಕಾಡುತ್ತಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ, ಇಡಿ ಎಸ್‌ಟಿ ನಾಯಕರನ್ನೇ ಗುರಿಯಾಗಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ದಾಳಿಯನ್ನು ಜಾರಕಿಹೊಳಿ ಅವರ ರಾಜಕೀಯ ಏಳಿಗೆಯನ್ನು ತಡೆಯುವ ಪ್ರಯತ್ನ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Sep 09, 2026 03:31 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More