ಮೋದಿ ಮುಖ ನೋಡಿ ಮತ ಹಾಕಿ, ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ: ಯತ್ನಾಳ್

Rakesh Nayak Manchi

Updated on: Mar 18, 2023 | 5:31 PM

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಟೊಂಕ ಕಟ್ಟಿ ನಿಂತಿರುವ ಬಿಜೆಪಿ ಮತದಾರರನ್ನು ತನ್ನತ್ತ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಬಿಜೆಪಿ ಶಾಸಕ ಯತ್ನಾಳ್ ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದಿದ್ದಾರೆ.

ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಟೊಂಕ ಕಟ್ಟಿ ನಿಂತಿರುವ ಬಿಜೆಪಿ, ಮತದಾರರನ್ನು ತನ್ನತ್ತ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದಿದ್ದಾರೆ. ವಿಜಯಪುರದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ದಿನ ಮೋದಿ ಮುಖ ನೋಡುವುದು, ಮತದಾನ ಮಾಡುವುದು ಅಷ್ಟೆ. ಮೋದಿಗೆ ಮತ ಹಾಕಿದರೆ ಸುರಕ್ಷಿತವಾಗಿ ಇರುತ್ತೀರಿ. ಇಲ್ಲದಿದ್ದರೆ ಪಾಕಿಸ್ತಾನ ದೇಶದಂತೆ ಎಲ್ಲರೂ ದಿವಾಳಿಯಾಗಬೇಕಾಗುತ್ತದೆ, ಭಿಕ್ಷೆ ಬೇಡಬೇಕಾಗುತ್ತೆ ಎಂದು ಕೈಸನ್ನೆ ಮೂಲಕ ತೋರಿಸಿದರು. ನರೇಂದ್ರ ಮೋದಿ (Narendra Modi)ಯವರನ್ನು ಪ್ರಧಾನಿಯನ್ನಾಗಿ ಪಡೆದಿರುವುದು ನಮ್ಮ ಸುದೈವ ಅಂತಾನೂ ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Mar 18, 2023 05:31 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.