AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!

ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!

ಭಾವನಾ ಹೆಗಡೆ
|

Updated on: Nov 09, 2026 | 9:05 AM

Share

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ "ಚಾಕು ಚೂರಿ" ರಾಜಕೀಯ ಹಾಗೂ ಪೋಸ್ಟರ್ ಸಮರ ತೀವ್ರಗೊಂಡಿದೆ. ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು-ಚೂರಿ ಪಾರ್ಸೆಲ್ ಕಳುಹಿಸಿದ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಆರ್. ಅಶೋಕ್ ಕಾಂಗ್ರೆಸ್ ನಡೆಯನ್ನು ಖಂಡಿಸಿದ್ದರೆ, ಬಿ.ವೈ. ವಿಜಯೇಂದ್ರ ಪೋಸ್ಟರ್ ರಾಜಕೀಯವನ್ನು ಟೀಕಿಸಿದ್ದಾರೆ.

ಬೆಂಗಳೂರು, ನವೆಂಬರ್ 09: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷವು “ಚಾಕು ಚೂರಿ ಪಾಲಿಟಿಕ್ಸ್” ಮತ್ತು ಪೋಸ್ಟರ್ ಸಮರದ ಮೂಲಕ ತಾರಕಕ್ಕೇರಿದೆ. ಇತ್ತೀಚೆಗೆ, ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಚಾಕು-ಚೂರಿ ಪಾರ್ಸೆಲ್ ಕಳುಹಿಸಿದ ಘಟನೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಚಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. “ಕದ್ದು ಮುಚ್ಚಿ ಚಾಕು ತರುವುದೇಕೆ, ಧೈರ್ಯವಾಗಿ ಬನ್ನಿ” ಎಂದು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಚಲವಾದಿ ನಾರಾಯಣಸ್ವಾಮಿ ಅವರು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿ, ಕಾಂಗ್ರೆಸ್ ಪಕ್ಷದ ಮೇಲೆ ಗುಂಡಾ ಸಂಸ್ಕೃತಿಯ ಆರೋಪ ಮಾಡಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಪೋಸ್ಟರ್ ವಾರ್ ಕೂಡ ಜೋರಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಿವಾಸದ ಮುಂದೆ ಮತ್ತು ಬೆಂಗಳೂರಿನಲ್ಲಿ ಬಿ.ಎಸ್. ಯಡಿಯೂರಪ್ಪ ನಿವಾಸದ ಮುಂದೆ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಇದನ್ನು ಬಿಜೆಪಿ ನಾಯಕರು ಖಂಡಿಸಿ, ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ಇದನ್ನು ಚೀಪ್ ರಾಜಕೀಯ ಎಂದು ಕರೆದಿದ್ದಾರೆ. ಬೆಂಗಳೂರಿನ ಹಲವೆಡೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಯುವ ಕಾಂಗ್ರೆಸ್ ಪೋಸ್ಟರ್ ಅಂಟಿಸಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವ್ಯಂಗ್ಯದ ಪೋಸ್ಟರ್‌ಗಳು ಕಂಡುಬಂದಿವೆ. ಈ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಬೂದಿಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More