ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ

Updated on: May 28, 2026 | 8:48 AM

ಕರ್ನಾಟಕ ಸಿಎಂ ಬದಲಾವಣೆಯ ಸದ್ದು ಜೋರಾಗಿರುವಾಗ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸ ರಾಜಕೀಯ ಹೈ ವೋಲ್ಟೇಜ್ ಕೇಂದ್ರವಾಗಿದೆ. ತಡರಾತ್ರಿವರೆಗೂ ಚರ್ಚೆ ನಡೆಸಿದ ಡಿಕೆಶಿ, ಸಿಎಂ ನಿವಾಸದಲ್ಲಿ ನಡೆಯುವ ಉಪಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಆಪ್ತರು ಮತ್ತು ಕಾರ್ಯಕರ್ತರ ಆಗಮನ ನಿರೀಕ್ಷಿಸಿ, ಮನೆ ಬಳಿ ಹೈ ಸೆಕ್ಯೂರಿಟಿ ನಿಯೋಜಿಸಲಾಗಿದೆ.

ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪೊಲೀಸರು, ಶೇಷಾದ್ರಿಪುರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ನಿವಾಸಕ್ಕೆ ಸಂಪರ್ಕಿಸುವ ಎರಡು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಆಯೋಜಿಸಿರುವ ಉಪಹಾರ ಕೂಟದಲ್ಲಿ ಮುಖ್ಯಮಂತ್ರಿ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ. ಕಳೆದ ದಿನ ಮುಖ್ಯಮಂತ್ರಿ ನಿವಾಸದ ಬಳಿ ಇದ್ದ ಜನರ ಚಿತ್ತ, ಇಂದು ಡಿಸಿಎಂ ನಿವಾಸದತ್ತ ಶಿಫ್ಟ್ ಆಗಿರುವುದು ರಾಜ್ಯ ರಾಜಕಾರಣದ ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More