ದೆಹಲಿಯಲ್ಲಿ ಬೀಡುಬಿಟ್ಟ ಡಿ.ಕೆ. ಶಿವಕುಮಾರ್​ ಬಣ: ಕುತೂಹಲ ಮೂಡಿಸಿದ ಶಾಸಕರ ನಡೆ

Edited By:

Updated on: Nov 24, 2025 | 12:56 PM

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವದ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ರಾಷ್ಟ್ರ ರಾಜಧಾನಿಯನ್ನ ಶಾಸಕರ ತಂಡ ತಲುಪಿದ್ದು, ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಿರಲಿಲ್ಲ.

ದೇವನಹಳ್ಳಿ, ನವೆಂಬರ್​​ 24: ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ದೆಹಲಿ ತಲುಪಿದ ಈ ಆರು ಶಾಸಕರ ತಂಡದಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜ್, ಇಕ್ಬಾಲ್ ಹುಸೇನ್, ಶಾಸಕಿ ನಯನಾ ಮೋಟಮ್ಮ ಮತ್ತು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸೇರಿದ್ದಾರೆ. ಈ ತಂಡವು ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಪಕ್ಷದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಿರಲಿಲ್ಲ. ಕಳೆದ ವಾರವೂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ದೆಹಲಿಗೆ ಭೇಟಿ ನೀಡಿದ್ದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 24, 2025 12:54 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More