ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ರಾಜಣ್ಣ ಭೇಟಿ ಮಾಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿನ ರಾಜಕೀಯ ಗೊಂದಲವನ್ನು ಶೀಘ್ರ ಬಗೆಹರಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು, ಡಿಸೆಂಬರ್ 21: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದೆ. ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಪರವಾಗಿ ಬರೆದ ಈ ಪತ್ರದಲ್ಲಿ, ರಾಜ್ಯದಲ್ಲಿರುವ ರಾಜಕೀಯ ಗೊಂದಲಗಳನ್ನು ಆದಷ್ಟು ಬೇಗ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಆಡಳಿತ ಮತ್ತು ಪಕ್ಷದ ಪ್ರತಿಷ್ಠೆಗೆ ಈ ಗೊಂದಲಗಳು ಧಕ್ಕೆ ತರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 21, 2025 09:45 AM

