ಹೈಕಮಾಂಡ್​ನಿಂದ ಸಿಎಂಗೆ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು

Edited By:

Updated on: May 25, 2026 | 2:37 PM

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್‌ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್‌ ನೀಡಿದೆ. ಹೀಗಾಗಿ ಕಾಂಗ್ರೆಸ್​​ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ನಾಳೆ 11 ಗಂಟೆಗೆ ಹೈಕಮಾಂಡ್ ಪ್ರಶ್ನೆ ಪತ್ರಿಕೆ ಕೊಡುತ್ತೆ. ಆ ಬಳಿಕ ಪ್ರಶ್ನೆಗೆ ಉತ್ತರ ಟಿಕ್ ಮಾಡ್ತಾರೆ. ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ ಬಿಡಿ ಎಂದು ಪರೋಕ್ಷವಾಗಿ ಅಧಿಕಾರ ಹಂಚಿಕೆ ಚರ್ಚೆಗೆ ಬ್ರೇಕ್ ಬೀಳಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.

ಬೆಂಗಳೂರು, (ಮೇ 25): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್‌ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್‌ ನೀಡಿದೆ. ಹೀಗಾಗಿ ಕಾಂಗ್ರೆಸ್​​ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ನಾಳೆ 11 ಗಂಟೆಗೆ ಹೈಕಮಾಂಡ್ ಪ್ರಶ್ನೆ ಪತ್ರಿಕೆ ಕೊಡುತ್ತೆ. ಆ ಬಳಿಕ ಪ್ರಶ್ನೆಗೆ ಉತ್ತರ ಟಿಕ್ ಮಾಡ್ತಾರೆ. ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ ಬಿಡಿ ಎಂದು ಪರೋಕ್ಷವಾಗಿ ಅಧಿಕಾರ ಹಂಚಿಕೆ ಚರ್ಚೆಗೆ ಬ್ರೇಕ್ ಬೀಳಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 25, 2026 02:28 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More