ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

Updated on: May 26, 2026 | 6:37 PM

ಕರ್ನಾಟಕ ಕಾಂಗ್ರೆಸ್  (karnataka Congress) ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ತೆರೆ ಎಳೆದಿದ್ದಾರೆ. ಇಂದು (ಮೇ 26) ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನವದೆಹಲಿ, (ಮೇ 26): ಕರ್ನಾಟಕ ಕಾಂಗ್ರೆಸ್  (karnataka Congress) ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ತೆರೆ ಎಳೆದಿದ್ದಾರೆ. ಇಂದು (ಮೇ 26) ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವೇಣುಗೋಪಾಲ್‌ ಹೇಳಿದ್ದೇನು?

ನಾವು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿದ್ದೇವೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಾನು ಭಾಗವಹಿಸಿದ್ದೆ. ಸಭೆಯಲ್ಲಿ ಕೇವಲ ಮುಂಬರುವ ವಿಧಾನ ಪರಿಷತ್‌ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾತ್ರ ಮಾತುಕತೆಯಾಗಿದೆ. ಚುನಾವಣಾ ವಿಚಾರವನ್ನು ಹೊರತುಪಡಿಸಿ ನಾವು ಮತ್ಯಾವ ಬಾಕಿ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಹಾಗೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಉಳಿದೆಲ್ಲಾ ವಿಚಾರಗಳು ಕೇವಲ ವದಂತಿ ಮತ್ತು ಊಹೆ ಮಾತ್ರ ಎಂದು ಎಂದು ಸ್ಪಷ್ಟಪಡಿಸಿದರು.

ಹಾಗಾದ್ರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ  ಹೊರಗಿಟ್ಟು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಯ್ತಾ?  ಇನ್ನು ಸಭೆ ಬಳಿಕ ತೆರಳುವ ಸಂದರ್ಭದಲ್ಲಿ ಸಿದ್ದರಾಮಯ್ಯ ಬೇಸರದಲ್ಲಿ ತೆರಳಿದ್ದು, ಸಂಥಿಂಗ್ ಸಂಥಿಂಗ್ ಬಗ್ಗೆ ಸಭೆಯಲ್ಲಿ ಚರ್ಚೆಗಳಾಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಊಹಾಪೋಹಗಳಿಗೆ ತೆರೆ: ಚುನಾವಣಾ ಸಂಬಂಧಿ ಚರ್ಚೆಗಷ್ಟೇ ಸೀಮಿತವಾಯ್ತಾ ಕಾಂಗ್ರೆಸಿಗರ ಹೈವೋಲ್ಟೇಜ್​​ ಮೀಟಿಂಗ್​?

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More