ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ
ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.
ಬೆಂಗಳೂರು, (ನವೆಂಬರ್ 25): ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ (Power Sharing Fight) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar) ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ, ರಹಸ್ಯವಾಗಿಯೇ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದು, ಕಾಂಗ್ರೆಸ್ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಹೇಳಿರುವ ಸಂದೇಶವನ್ನು ಪ್ರಿಯಾಂಕ್ ಖರ್ಗೆ ಹೊತ್ತು ಬೆಂಗಳೂರಿಗೆ ತಂದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ.