ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಪ್ರತ್ಯೇಕವಾಗಿ ಸಿಎಂ-ಡಿಸಿಎಂ ಭೇಟಿಯಾಗಿ ಚರ್ಚೆ

Updated on: Nov 25, 2025 | 6:20 PM

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.

ಬೆಂಗಳೂರು, (ನವೆಂಬರ್ 25): ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ​ ಜಟಾಪಟಿ (Power Sharing Fight) ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar)​ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್​ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ಮಧ್ಯೆ ಸಚಿವ ಪ್ರಿಯಾಂಕ್​ ಖರ್ಗೆ, ರಹಸ್ಯವಾಗಿಯೇ ರಾಹುಲ್​ ಗಾಂಧಿ ಅವರನ್ನ ಭೇಟಿ ಮಾಡಿದ್ದು, ಕಾಂಗ್ರೆಸ್​​ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಹೇಳಿರುವ ಸಂದೇಶವನ್ನು ಪ್ರಿಯಾಂಕ್ ಖರ್ಗೆ ಹೊತ್ತು ಬೆಂಗಳೂರಿಗೆ ತಂದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ.

ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಹೋಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More