ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ
ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು...ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಈ ವೇಳೆ ಡಿಕೆ ಶಿವಕುಮಾರ್ ಅವರು ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರು, (ಜನವರಿ 13): ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ (Rahul Gandhi) ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು…ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಈ ವೇಳೆ ಡಿಕೆ ಶಿವಕುಮಾರ್ ಅವರು ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.
ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜೊತೆ ಡಿ.ಕೆ.ಶಿವಕುಮಾರ್ ಒಬ್ಬರೇ ಮಾತುಕತೆ ನಡೆಸಿದ್ದಾರೆ. ಈ ವೇಳೆ ಏನು ತಲೆಕೆಡಿಸಿಕೊಳ್ಳಬೇಡಿ. ಶೀಘ್ರವೇ ನಿಮ್ಮನ್ನ ದೆಹಲಿಗೆ ಕರೆಯುತ್ತೇವೆ ಎಂದು ಡಿಕೆಶಿಗೆ ರಾಹುಲ್ ಗಾಂಧಿ ಭರವಸೆ ನೀಡಿ ತೆರಳಿದ್ದಾರೆ ಎಂದು ಟಿವಿ9ಗೆ ಕಾಂಗ್ರೆಸ್ ಮೂಲಗಳು ತಿಳಿಸಿದ್ದು,ಈ ಬೆಳವಣಿಗೆ ಕಾಂಗ್ರೆಸ್ನಲ್ಲಿ ಮಾತ್ರವಲ್ಲದೇ ರಾಜ್ಯ ರಾಜಕಾರಣದಲ್ಲೂ ಸಂಚಲನ ಮೂಡಿಸಿದೆ.
