AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್  ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ

ರಮೇಶ್ ಬಿ. ಜವಳಗೇರಾ
|

Updated on:Feb 10, 2026 | 2:48 PM

Share

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ ಮತ್ತೆ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮುನ್ನೆಲೆಗೆ ಬಂದಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೋ.

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ ಮತ್ತೆ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮುನ್ನೆಲೆಗೆ ಬಂದಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೋ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 10, 2026 02:47 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More