AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ

ರಮೇಶ್ ಬಿ. ಜವಳಗೇರಾ
|

Updated on:May 26, 2026 | 10:35 PM

Share

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದು, ಈ ವೇಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಆಪ್ತರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು, ನಿಮ್ಮ ಪರವಾಗಿ ನಾವೇ ರಾಹುಲ್​ ಗಾಂಧಿ ಬಳಿ ಮಾತನಾಡುತ್ತೇವೆ ಎಂದಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಇಲ್ಲ, ನಾನು ರಾಹುಲ್​ ಗಾಂಧಿಯವರನ್ನ ನಿರಾಕರಿಸಲು ಸಾಧ್ಯವಿಲ್ಲ. ನಾನು ರಾಜೀನಾಮೆ ಕೊಡುತ್ತೇನೆ, ನೀವು ಬೇಕಾದ್ರೆ ಹೋಗಿ ಮಾತಾಡಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?

Published on: May 26, 2026 09:54 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More