ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ ಪರಮೇಶ್ವರ್!
ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆಯಾಗುವ ಸಾಧ್ಯತೆ ಇದೆ. ಖಾಸಗಿ ಮಾರುಕಟ್ಟೆ ದರ ಮತ್ತು ಸರ್ಕಾರಿ ಮಾರ್ಗಸೂಚಿ ದರಗಳ ನಡುವಿನ ವ್ಯತ್ಯಾಸದಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಹೀಗಾಗಿ ಪ್ರದೇಶವಾರು ಆಸ್ತಿ ಮಾರ್ಗಸೂಚಿ ಮೌಲ್ಯ ಪರಿಷ್ಕರಣೆಗೆ ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದರ ಏರಿಕೆಯ ಸಾಧ್ಯತೆ ಇದೆ.
ಬೆಂಗಳೂರು, ನವೆಂಬರ್ 18: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖಾಸಗಿ ಮಾರುಕಟ್ಟೆ ದರ ಮತ್ತು ಸರ್ಕಾರಿ ಮಾರ್ಗಸೂಚಿ ದರಗಳ ನಡುವೆ ಭಾರಿ ವ್ಯತ್ಯಾಸವಿದೆ ಎಂದಿದ್ದಾರೆ. ಖಾಸಗಿ ಮಾರುಕಟ್ಟೆಯಲ್ಲಿ ಒಂದು ಆಸ್ತಿಯ ಬೆಲೆ 20 ಕೋಟಿ ರೂಪಾಯಿ ಇದ್ದರೆ, ಸರ್ಕಾರಿ ಮಾರ್ಗಸೂಚಿ ದರ ಕೇವಲ 5 ಕೋಟಿ ರೂಪಾಯಿ ಇದೆ. ಇದರಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.
ಹೀಗಾಗಿ ಪ್ರದೇಶವಾರು ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಹಾಗೂ ಇತರೆ ಜಿಲ್ಲೆಗಳಲ್ಲಿ ಸ್ಥಳೀಯ ಪ್ರದೇಶಗಳಿಗೆ ಅನುಗುಣವಾಗಿ ದರ ನಿಗದಿಪಡಿಸುವ ಚಿಂತನೆಯಿದೆ. ಈ ಕುರಿತು ಇನ್ನೂ ಪರಿಶೀಲನೆ ನಡೆಯುತ್ತಿದ್ದು, ದರ ಏರಿಕೆಯ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
