AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡೇ ದಿನ ವರುಣನ ಅಬ್ಬರ, ಮತ್ತೆ ಮಳೆ ಬರಲ್ಲ: ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಇನ್ನೆರಡೇ ದಿನ ವರುಣನ ಅಬ್ಬರ, ಮತ್ತೆ ಮಳೆ ಬರಲ್ಲ: ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಅಕ್ಷಯ್​ ಪಲ್ಲಮಜಲು​​
|

Updated on: Jul 09, 2026 | 10:52 AM

Share

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶೀಘ್ರವೇ ಬ್ರೇಕ್ ಬೀಳಲಿದೆ. ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಪ್ರಕಾರ, ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು, ನಂತರ ಕ್ಷೀಣಿಸಲಿದೆ. 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 11ರಿಂದ ಬಹುತೇಕ ಕಡೆ ಒಣಹವೆ ನಿರೀಕ್ಷಿಸಲಾಗಿದೆ.

ಬೆಂಗಳೂರು, ಜು.9: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಸುರಿಯುತ್ತಿರುವ ಮಳೆಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ ಎಂಬ ಮುನ್ಸೂಚನೆಯನ್ನು ನೀಡಿವೆ. ಇನ್ನೆರಡು ದಿನಗಳ ಕಾಲ ಮಾತ್ರ ರಾಜ್ಯಾದ್ಯಂತ ಅಬ್ಬರದ ಮಳೆಯಾಗಲಿದ್ದು, ಆ ಬಳಿಕ ಮಳೆರಾಯ ಮಂಕಾಗಲಿದ್ದಾನೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ತಿಳಿಸಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ಮಲೆನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಮಳೆಯೊಂದಿಗೆ ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜುಲೈ 10ರಂದು ಕರಾವಳಿ ಹಾಗೂ ಘಟ್ಟ ಪ್ರದೇಶಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಆದರೆ, ಜುಲೈ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕ್ಷೀಣಿಸಲಿದ್ದು, ಒಣಹವೆ ಮೂಡುವ ಸಾಧ್ಯತೆ ಹೆಚ್ಚಿದೆ ಎಂದು ಡಾ. ಲತಾ ಸ್ಪಷ್ಟಪಡಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆ ಇರುವುದಿಲ್ಲ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More