AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಗಾಳಿ ಮಳೆಯಬ್ಬರ: ಬೇರು ಸಮೇತ ನೆಲಕ್ಕುರುಳಿದ ಮರಗಳು, ಕ್ರೇನ್​​ ಧರಾಶಾಹಿ

ಕೊಪ್ಪಳದಲ್ಲಿ ಗಾಳಿ ಮಳೆಯಬ್ಬರ: ಬೇರು ಸಮೇತ ನೆಲಕ್ಕುರುಳಿದ ಮರಗಳು, ಕ್ರೇನ್​​ ಧರಾಶಾಹಿ

ಶಿವಕುಮಾರ್ ಪತ್ತಾರ್
| Edited By: |

Updated on: May 18, 2026 | 11:57 AM

Share

ಕರ್ನಾಟಕದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಭಾರಿ ಅವಾಂತರಗಳು ನಡೆದಿವೆ. ಕೊಪ್ಪಳದ ಕುಷ್ಟಗಿಯಲ್ಲಿ ಬೃಹತ್ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಉರುಳಿದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ವೇಳೆ, ತಾವರಗೇರಾದಲ್ಲಿ ಗಾಳಿಗೆ ಕ್ರೇನ್ ಪತನಗೊಂಡಿದ್ದು, ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದೆ.

ಕೊಪ್ಪಳ, ಮೇ 18: ಕರ್ನಾಟಕ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿ ವ್ಯಾಪಕ ಅನಾಹುತಗಳನ್ನು ಸೃಷ್ಟಿಸಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿನ್ನೆ (ಮೇ 17) ಸಂಜೆ ಸುರಿದ ಭಾರೀ ಮಳೆಯ ಆರ್ಭಟಕ್ಕೆ ಬೃಹತ್ ಮರಗಳು ಬೇರುಸಮೇತ ಧರೆಗುರುಳಿವೆ. ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿತ್ತು. ಮತ್ತೊಂದೆಡೆ ಮಳೆ ಮತ್ತು ಬಿರುಗಾಳಿಯ ಅಬ್ಬರಕ್ಕೆ ಕೊಪ್ಪಳದ ತಾವರಗೇರ ಪಟ್ಟಣದ ಬಳಿ ಬೃಹತ್ ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಕ್ರೇನ್ ಪತನಗೊಂಡಿದೆ. ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಈ ಕ್ರೇನ್ ಕುಸಿಯುವಾಗ ಅಲ್ಲೇ ಇದ್ದ ಕಾರ್ಮಿಕರು ಕೂದಲಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ, ಕೊಪ್ಪಳ ಮತ್ತು ಕುಷ್ಟಗಿ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More