AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ!

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ!

ಭಾವನಾ ಹೆಗಡೆ
|

Updated on: May 24, 2026 | 11:09 AM

Share

ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರ್ಗಿ, ಜಂಬಗಿ ಮತ್ತು ಕಲುತ್ತಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಬಿದ್ದಿದೆ. ಗಾಳಿ ಸಹಿತ ಮಳೆಗೆ ಹಲವು ಕಡೆ ಮರಗಳು ಧರೆಗುರುಳಿವೆ.

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರ್ಗಿ, ಜಂಬಗಿ ಮತ್ತು ಕಲುತ್ತಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಬಿದ್ದಿದೆ. ಗಾಳಿ ಸಹಿತ ಮಳೆಗೆ ಹಲವು ಕಡೆ ಮರಗಳು ಧರೆಗುರುಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More