ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

Updated on: Jun 11, 2026 | 4:26 PM

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು (ಜೂ.11): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

ಆವಿರೋಧವಾಗಿ ರಾಜ್ಯಸಭೆಗೆ ಪ್ರವೇಸಿಸಿದ ಬಿಜೆಪಿಯ ಎಂ.ನಾಗರಾಜ್ ಪ್ರತಿಕ್ರಿಯಿಸಿ, ಕೇಂದ್ರದ ವರಿಷ್ಠರು, ಮೋದಿ, ಅಮಿತ್‌ ಶಾ ಅವರಿಗೆ ಧನ್ಯವಾದ ಸಲ್ಲಿಸ್ತೇನೆ. ಈ ಹಿಂದೆ‌ ಕೋರ್‌ ಕಮಿಟಿ ಸದಸ್ಯರಿಗೆ ಮನವಿ ಮಾಡಿದ್ದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಕೆಲಸ ಮಾಡ್ತಿದ್ದೇವೆ. ಈ ಅವಕಾಶವನ್ನು ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ‌ ಮಾಡ್ತೇನೆ ಎಂದರು.

ಇನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾಗಿರುವ ಕಾಂಗ್ರೆಸ್​​​ನ ಪವನ್ ಖೇರಾ ಮಾತನಾಡಿ, ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ. ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ ಎಂದು ಸಂತಸ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 11, 2026 04:25 PM
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More