ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

Updated on: Nov 01, 2026 | 12:14 PM

ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಸಂಭ್ರಮದಲ್ಲಿ ಭಾಗವಹಿಸಿದರು. ಕರ್ನಾಟಕ ಸಂಘದಿಂದ ಕರ್ನಾಟಕ ಭವನದವರೆಗೆ ನಡೆದ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ 500ಕ್ಕೂ ಹೆಚ್ಚು ಕನ್ನಡಿಗರು ಪಾಲ್ಗೊಂಡು ನಾಡು, ನುಡಿ, ಸಂಸ್ಕೃತಿಯ ಏಕತೆಯನ್ನು ಸಾರಿದರು.

ನವದೆಹಲಿ, ನವೆಂಬರ್ 01: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕರ್ನಾಟಕದ ಶ್ರೀಮಂತ ಇತಿಹಾಸ, ಭಾಷೆ ಮತ್ತು ಸಂಸ್ಕೃತಿಯ ಏಕತೆಯನ್ನು ಸ್ಮರಿಸುವ ಈ ಮಹತ್ವದ ದಿನದಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದೆಹಲಿಯ ಕನ್ನಡಿಗರು ಕರ್ನಾಟಕ ಸಂಘದ ಅಧ್ಯಕ್ಷ ರೇಣುಕುಮಾರ್ ಅವರ ನೇತೃತ್ವದಲ್ಲಿ ಅದ್ಧೂರಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ನವದೆಹಲಿಯ ಕರ್ನಾಟಕ ಸಂಘದಿಂದ ಕರ್ನಾಟಕ ಭವನದವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ಜಾಥಾದಲ್ಲಿ 500ಕ್ಕೂ ಹೆಚ್ಚು ಕನ್ನಡಿಗರು ಉತ್ಸಾಹದಿಂದ ಭಾಗವಹಿಸಿ ಕನ್ನಡದ ಜಯಘೋಷ ಮೊಳಗಿಸಿದರು. ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ನೆರೆದಿದ್ದ ಎಲ್ಲರೂ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” ಹಾಗೂ ರಾಷ್ಟ್ರಗೀತೆ “ಜನ ಗಣ ಮನ” ಹಾಡುವುದರ ಮೂಲಕ ಕನ್ನಡ ಮತ್ತು ಭಾರತಕ್ಕೆ ತಮ್ಮ ಗೌರವವನ್ನು ಸಲ್ಲಿಸಿದರು. ಕನ್ನಡ ರಾಜ್ಯೋತ್ಸವ ಕೇವಲ ಒಂದು ಆಚರಣೆಯಲ್ಲ, ಅದು ನಮ್ಮ ನಾಡಿನ ಹೆಮ್ಮೆ ಮತ್ತು ಸಂಸ್ಕೃತಿಯ ಪ್ರತಿಬಿಂಬ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More