ವಾಟಾಳ್ ನಾಗರಾಜ್​ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು ಎಂದು ನನಗೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

Updated on: Oct 30, 2026 | 3:02 PM

ರಾಜ್ಯೋತ್ಸವ ಪ್ರಶಸ್ತಿಗಳನ್ನು ಹಿಂದಿನಂತೆಯೇ ಈ ಬಾರಿಯೂ ನೀಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಾಟಾಳ್ ನಾಗರಾಜ್ ಅವರಿಗೆ ಪ್ರಶಸ್ತಿ ನೀಡಲು ಆಸೆಯಿತ್ತು, ಅವರ ಹೆಸರನ್ನು ಸಮಿತಿಯಿಂದ ತೆರವುಗೊಳಿಸಲಾಗಿತ್ತು. ಆದರೆ, ವಾಟಾಳ್ ಅವರು ಈ ಹಿಂದೆ ಕೂಡ ಪ್ರಶಸ್ತಿ ನಿರಾಕರಿಸಿದ್ದರು ಮತ್ತು ಈಗಲೂ ಬೇಡವೆಂದು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ರಾಜ್ಯೋತ್ಸವ ಆಚರಣೆಗಳು ಮತ್ತು ಪ್ರಶಸ್ತಿ ವಿತರಣೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು. ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಿ, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಹಿಂದಿನ ವರ್ಷಗಳಲ್ಲಿ ನೀಡಿದಂತೆಯೇ ಈ ಬಾರಿಯೂ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದರು. ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಹೆಸರನ್ನು ಪ್ರಶಸ್ತಿಗೆ ಸಮಿತಿಯಿಂದ ತೆರವುಗೊಳಿಸಲಾಗಿತ್ತು. “ವಾಟಾಳ್ ನಾಗರಾಜ್ ಅವರಿಗೆ ಪ್ರಶಸ್ತಿ ನೀಡಬೇಕು ಎಂದು ನಮಗೂ ಆಸೆ ಇತ್ತು. ಅವರು ಸಾಕಷ್ಟು ಹೋರಾಟ ಮಾಡಿದ್ದಾರೆ. ಆದರೆ, ಅವರು ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಹಿಂದೆಯೂ ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದರು, ಈಗಲೂ ಬೇಡ ಎಂದಿದ್ದಾರೆ” ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More