GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು

Updated on: Mar 06, 2026 | 8:19 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರ ಗಾತ್ರ 4 ಲಕ್ಷದ 48 ಸಾವಿರದ 4 ಕೋಟಿ ರೂಪಾಯಿ. ಬಜೆಟ್ 9.4% ಬೆಳವಣಿಗೆ ಕಂಡಿದೆ. ಕೇಂದ್ರ ಸರ್ಕಾರದ ಜಿಎಸ್‌ಟಿ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ತೆರಿಗೆ ಬೆಳವಣಿಗೆ ದರವು 10-12% ರಿಂದ 4% ಕ್ಕೆ ಕುಸಿದಿದೆ. ಆದರೂ, ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿದೆ.

ಬೆಂಗಳೂರು, ಮಾರ್ಚ್​​ 06: ಜಿಎಸ್‌ಟಿ ಹಣ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್​​ ಮಂಡನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿದ್ದೇನೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಸಿಕೊಂಡಿಲ್ಲ, ಮೈನಸ್ ಗ್ರೋತ್‌ನಲ್ಲಿದ್ದಾವೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲು 10,000 ಕೋಟಿ ರೂ ಕಡಿಮೆ. ಮುಂದೆ ಇದು 15 ಸಾವಿರ ಕೋಟಿ ರೂ ಕಡಿಮೆಯಾಗುತ್ತೆ. ಆದರೂ ನಾವು ವಿತ್ತೀಯ ಶಿಸ್ತು ಉಲ್ಲಂಘನೆಯನ್ನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More