AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾಳೆ ನಡೆಯುವ ನೇಮಕಾತಿ ಪರೀಕ್ಷೆಗೆ ಬಿಗಿ ಭದ್ರತೆ; ಸಾಮಾಜಿಕ ಜಾಲತಾಣ, ಹಿಂದಿನ ಅಪರಾಧಿಗಳ ಮೇಲೆ ನಿಗಾ

Video: ನಾಳೆ ನಡೆಯುವ ನೇಮಕಾತಿ ಪರೀಕ್ಷೆಗೆ ಬಿಗಿ ಭದ್ರತೆ; ಸಾಮಾಜಿಕ ಜಾಲತಾಣ, ಹಿಂದಿನ ಅಪರಾಧಿಗಳ ಮೇಲೆ ನಿಗಾ

ಅಕ್ಷತಾ ವರ್ಕಾಡಿ
|

Updated on:Aug 01, 2026 | 2:33 PM

Share

ರಾಜ್ಯದಲ್ಲಿ ನಡೆಯಲಿರುವ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ನಿಗಾ, ಹಳೆಯ ಪ್ರಕರಣಗಳ ಆರೋಪಿಗಳ ಮೇಲೆ ಸರ್ವೆಲೆನ್ಸ್, ಕೋಚಿಂಗ್ ಸೆಂಟರ್‌ಗಳಿಗೆ ಎಚ್ಚರಿಕೆ ಹಾಗೂ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಹೊಸ ನಿಯಮಾವಳಿಗಳನ್ನು ಜಾರಿಗೆ ತರಲಾಗುತ್ತಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪರೀಕ್ಷಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾಜಿಕ ಮಾಧ್ಯಮಗಳ ಮೇಲೆ ತೀವ್ರ ನಿಗಾ ಇರಿಸಲಾಗುತ್ತಿದೆ. WhatsApp, Telegram, Snapchat ನಂತಹ ವೇದಿಕೆಗಳಲ್ಲಿ ಹರಡುವ ಗಾಳಿಸುದ್ದಿಗಳು ಮತ್ತು ವದಂತಿಗಳನ್ನು ತಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿಗಾ ಇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹಿಂದೆ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ನಿರಂತರ ಕಣ್ಗಾವಲು ಇರಿಸಲಾಗಿದ್ದು, ಬೇಲ್ ಮೇಲೆ ಇರುವವರು ಮತ್ತು ಹಿಂದಿನ ಆರೋಪಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಕೋಚಿಂಗ್ ಸೆಂಟರ್‌ಗಳು ಮತ್ತು ತರಬೇತಿ ಸಂಸ್ಥೆಗಳಿಗೂ ಎಚ್ಚರಿಕೆ ನೀಡಲಾಗಿದ್ದು, ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಶ್ನೆಪತ್ರಿಕೆಗಳ ಶಾರ್ಟೇಜ್ ಅಥವಾ ವಿಳಂಬದಿಂದಾಗಿ ವದಂತಿಗಳು ಹರಡುವುದನ್ನು ತಪ್ಪಿಸಲು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಗೈರುಹಾಜರಾದ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆ ಮುಗಿಯುವ 5 ನಿಮಿಷಗಳ ಮೊದಲು ಮಾತ್ರ ಮುಟ್ಟಬೇಕು ಎಂಬ ಹೊಸ ನಿಯಮ ಜಾರಿಗೊಳಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Aug 01, 2026 02:32 PM

Follow Us