AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ

ಕಿರಣ್​ ಸೂರ್ಯ
| Edited By: |

Updated on: Nov 16, 2026 | 2:19 PM

Share

ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಸಾರಿಗೆ ನೌಕರರ ವೇತನ ಹಿಂಬಾಕಿ ಪಾವತಿಗೆ ರಾಜ್ಯ ಸರ್ಕಾರ 280 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್ 16: ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಸಾರಿಗೆ ನೌಕರರ ವೇತನ ಹಿಂಬಾಕಿ ಪಾವತಿಗೆ ರಾಜ್ಯ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ಸಾರಿಗೆ ನಿಗಮಗಳಿಗೆ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಸಾರಿಗೆ ನೌಕರರಿಗೆ ಸರ್ಕಾರ ಒಟ್ಟು 1,271 ಕೋಟಿ ರೂಪಾಯಿ ವೇತನ ಹಿಂಬಾಕಿ ನೀಡಬೇಕಿತ್ತು. ಈ ಪೈಕಿ ಮೊದಲ ಕಂತಿನಲ್ಲಿ 450 ಕೋಟಿ ರೂಪಾಯಿ ಹಾಗೂ ಎರಡನೇ ಕಂತಿನಲ್ಲಿ 170 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದೀಗ ಮೂರನೇ ಹಂತದಲ್ಲಿ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಅವರಿಗೆ ಸಚಿವ ಭೈರತಿ ಸುರೇಶ್ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More