ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳು ಈ ಯೋಜನೆಯಿಂದ ಅಂತರ್ಜಲ ಕುಸಿತ, ಭೂಕುಸಿತ, ಸಮುದ್ರದ ಉಪ್ಪು ನೀರಿನ ಒಳನುಗ್ಗುವಿಕೆ ಮತ್ತು ಮೀನುಗಾರಿಕೆಗೆ ಹಾನಿ ಸೇರಿದಂತೆ ಹಲವು ಪರಿಸರ ಸಮಸ್ಯೆಗಳಾಗುತ್ತವೆ ಎಂದು ಎಚ್ಚರಿಸಿದ್ದಾರೆ.
ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
