AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿಯಲು ಸೂಚಿಸಿದ್ದೇನೆಂದ ಗೃಹ ಸಚಿವ ಖರ್ಗೆ

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿಯಲು ಸೂಚಿಸಿದ್ದೇನೆಂದ ಗೃಹ ಸಚಿವ ಖರ್ಗೆ

ಗಣಪತಿ ಶರ್ಮಾ
|

Updated on: Jun 16, 2026 | 1:42 PM

Share

ಪೊಲೀಸ್ ಇಲಾಖೆಯು 66 ನಟೋರಿಯಸ್ ರೌಡಿಗಳ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಇದು ಗಮನಕ್ಕೆ ಬಂದಿದೆ. ಕೂಡಲೇ ತನಿಖೆ ನಡೆಸಿ ಸರಿಪಡಿಸಲು ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದೇನೆ ಎಂದಿದ್ದಾರೆ. ಈ ಪಟ್ಟಿಯಲ್ಲಿ ಸೈಲೆಂಟ್ ಸುನೀಲ ಸೇರಿದಂತೆ 8 ಬಿಜೆಪಿ ಕಾರ್ಯಕರ್ತರು ಇದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬೆಂಗಳೂರು, ಜೂನ್ 16: 66 ನಟೋರಿಯಸ್ ರೌಡಿಶೀಟರ್‌ಗಳಿಗೆ ಪಟ್ಟಿಯಿಂದ ಮುಕ್ತಿ ನೀಡುವ ವಿಚಾರ ಗಮನಕ್ಕೆ ಬಂದಿದ್ದು, ಅದಕ್ಕೆ ತಡೆ ನೀಡಿದ್ದೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ವಿಷಯ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿ, ಎಡವಟ್ಟು ಹೇಗೆ ಸಂಭವಿಸಿದೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದಿರುವ ಖರ್ಗೆ, ಲೋಪವನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಈ 66 ರೌಡಿಶೀಟರ್‌ಗಳ ಪಟ್ಟಿಯಲ್ಲಿ 8 ಜನರು ಬಿಜೆಪಿ ಕಾರ್ಯಕರ್ತರು ಎಂದು ಗೃಹ ಸಚಿವರು ಉಲ್ಲೇಖಿಸಿದ್ದಾರೆ. ಸೈಲೆಂಟ್ ಸುನೀಲ ಎಂಬ ರೌಡಿಶೀಟರ್‌ನ ಹೆಸರನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿರುವ ಅವರು, ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿನ ಈ ಲೋಪವನ್ನು ಸರಿಪಡಿಸಲು ಸರಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಸೀಮಂತ್ ಕುಮಾರ್ ಕೂಡ ಪ್ರತಿಕ್ರಿಯಿಸಿದ್ದು, ಕೈಬಿಟ್ಟಿರುವ ಪೈಕಿ ಬೆಂಗಳೂರಿನ 7 ರೌಡಿಶೀಟರ್​ಗಳಿದ್ದಾರೆ. ಉಳಿದವರು ಬೇರೆ ಬೇರೆ ಜಿಲ್ಲೆಯ ರೌಡಿಶೀಟರ್​​ಗಳು. ಕಾನೂನು ರೀತ್ಯಾ ಹಿನ್ನೆಲೆಯನ್ನು ಪರಿಶೀಲನೆ ಮಾಡುತ್ತೇವೆ. ಮತ್ತೊಮ್ಮೆ ಪರಿಶೀಲನೆ ಮಾಡಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More