ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ
ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬೆಲೆ ಏರಿಕೆಯ ಸಂಕಷ್ಟ ಎದುರಾಗಿದೆ. ಶಾಲಾ ಶುಲ್ಕ, ವಾಹನ ಬಾಡಿಗೆಯ ಜೊತೆಗೆ ನೋಟ್‌ಬುಕ್ ಹಾಗೂ ಪ್ರಿಂಟ್ ಪೇಪರ್‌ಗಳ ಬೆಲೆ ಶೇ 20-25ರಷ್ಟು ಹೆಚ್ಚಳವಾಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಇಂಧನ ದರ ಹೆಚ್ಚಳ ಇದಕ್ಕೆ ಕಾರಣವಾಗಿದೆ. ಇದರಿಂದ ಪೋಷಕರ ಜೇಬಿಗೆ ಹೊರೆಯಾಗಿದೆ.
ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ. ಪೇಪರ್ ತಯಾರಿಕೆಗೆ ಬೇಕಾದ ಕೆಮಿಕಲ್ಸ್ ಮತ್ತು ಕಲರ್ಸ್‌ಗಳು ಲಭ್ಯವಾಗುತ್ತಿಲ್ಲ. ಅಲ್ಲದೆ, ಇಂಧನ ದರ ಏರಿಕೆಯಿಂದಾಗಿ ನೋಟ್‌ಬುಕ್ಸ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಮುದ್ರಣ ವೆಚ್ಚವೂ ಹೆಚ್ಚಾಗಿದೆ ಎಂದು ಉದ್ಯಮಿಗಳು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ

