ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ

Edited By:

Updated on: May 20, 2026 | 9:30 AM

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬೆಲೆ ಏರಿಕೆಯ ಸಂಕಷ್ಟ ಎದುರಾಗಿದೆ. ಶಾಲಾ ಶುಲ್ಕ, ವಾಹನ ಬಾಡಿಗೆಯ ಜೊತೆಗೆ ನೋಟ್‌ಬುಕ್ ಹಾಗೂ ಪ್ರಿಂಟ್ ಪೇಪರ್‌ಗಳ ಬೆಲೆ ಶೇ 20-25ರಷ್ಟು ಹೆಚ್ಚಳವಾಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಇಂಧನ ದರ ಹೆಚ್ಚಳ ಇದಕ್ಕೆ ಕಾರಣವಾಗಿದೆ. ಇದರಿಂದ ಪೋಷಕರ ಜೇಬಿಗೆ ಹೊರೆಯಾಗಿದೆ.

ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ. ಪೇಪರ್ ತಯಾರಿಕೆಗೆ ಬೇಕಾದ ಕೆಮಿಕಲ್ಸ್ ಮತ್ತು ಕಲರ್ಸ್‌ಗಳು ಲಭ್ಯವಾಗುತ್ತಿಲ್ಲ. ಅಲ್ಲದೆ, ಇಂಧನ ದರ ಏರಿಕೆಯಿಂದಾಗಿ ನೋಟ್‌ಬುಕ್ಸ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಮುದ್ರಣ ವೆಚ್ಚವೂ ಹೆಚ್ಚಾಗಿದೆ ಎಂದು ಉದ್ಯಮಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More