ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು
ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ 27-28 ಹಿರಿಯ ಕಾಂಗ್ರೆಸ್ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿದ್ದಾರೆ. ಹೊಸ ಮುಖಗಳಿಗೆ ಅವಕಾಶ ನೀಡಬೇಕು ಮತ್ತು ಹಿರಿಯರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜೊತೆಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ.
ಬೆಂಗಳೂರು, ಮಾರ್ಚ್ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೂ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಇದು ಯಾವುದೇ ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶ ನೀಡಲು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಳಿಕ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
