AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರ ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

ಸಾಗರ ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

ರಮೇಶ್ ಬಿ. ಜವಳಗೇರಾ
|

Updated on:Feb 03, 2026 | 3:09 PM

Share

ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಿದ್ದಾರೆ.

ಶಿವಮೊಗ್ಗ, (ಫೆಬ್ರವರಿ 03): ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಸದ್ಯ ಅರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 03, 2026 03:07 PM