Karnataka Budget 2024 Live: ಸಿಎಂ ಸಿದ್ದರಾಮಯ್ಯರ 15ನೇ ಬಜೆಟ್ ಮಂಡನೆ ಲೈವ್​ ಇಲ್ಲಿದೆ​

Edited By:

Updated on: Feb 16, 2024 | 10:17 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಸಂಪೂರ್ಣ ಬಜೆಟ್​ ಹಲವು ನಿರೀಕ್ಷೆ ಮೂಡಿಸಿದೆ. ಬಜೆಟ್​ ಲೈವ್ ಇಲ್ಲಿದೆ ನೋಡಿ...​

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಸಿದ್ದರಾಮಯ್ಯ ಅವರ ಈ ಬಜೆಟ್​ ಹಲವು ನಿರೀಕ್ಷೆಗಳನ್ನು ಮೂಡಿಸಿದೆ. ಏಳನೇ ವೇತನ ಆಯೋಗದ ವರದಿಯಲ್ಲಿನ ಕೆಲ ಅಂಶಗಳನ್ನು ಘೋಷಿಸುವ ಸಾಧ್ಯತೆ ಇದೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮೀಸಲಿಡಬಹುದು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಬಹುದು. ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಗೆ ಹೆಚ್ಚಿನ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುದಾನ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2.O ಸರ್ಕಾರದ ಸಂಪೂರ್ಣ ಬಜೆಟ್​ ಹಲವು ನಿರೀಕ್ಷೆ ಮೂಡಿಸಿದೆ. ಬಜೆಟ್​ ಲೈವ್ ಇಲ್ಲಿದೆ ನೋಡಿ…​