AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ

ಅನಿಲ್​ ಕಲ್ಕೆರೆ
| Edited By: |

Updated on: Jul 03, 2026 | 11:30 AM

Share

ರಾಮನಗರದಲ್ಲಿ ನಡೆದ SIR ಪ್ರಕ್ರಿಯೆಯ ವಿವಾದ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. SIR ನಿಯಮಾನುಸಾರ ನಡೆಯಬೇಕು, ಮತದಾನದ ಹಕ್ಕು ಕಸಿಯುವಂತಿಲ್ಲ ಎಂದರು. ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಲಿದೆ. ಅಲ್ಲದೆ, ತಾವು ಕೇಳಿದ 12 ಪ್ರಶ್ನೆಗಳಿಗೆ ಉತ್ತರ ನೀಡುವ ಬಗ್ಗೆಯೂ ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

ಬೆಂಗಳೂರು, ಜುಲೈ 3: ರಾಮನಗರದಲ್ಲಿ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳಿವೆ. ಅವುಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುವುದನ್ನು ಬಿಟ್ಟು, ಸಮುದಾಯ ಭವನಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ, ಅದು ನಿಯಮ ಉಲ್ಲಂಘನೆಯಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖರ್ಗೆ ತಿಳಿಸಿದರು. ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಪ್ರತಿಯೊಂದು ಕಾರ್ಯವೂ ಸಂವಿಧಾನಬದ್ಧವಾಗಿ ನಡೆಯಬೇಕು ಎಂದು ಅವರು ಒತ್ತಿ ಹೇಳಿದರು.

ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಬೂತ್‌ಗಳನ್ನು ವೈಯಕ್ತಿಕವಾಗಿ ಪರಿಶೀಲಿಸಲು ಸಾಧ್ಯವಿಲ್ಲ. ಸ್ಥಳೀಯ ನಾಯಕರು ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಉದ್ದೇಶದಿಂದ ಈ ರೀತಿ ಮಾಡಿರಬಹುದು ಎಂದು ಖರ್ಗೆ ಹೇಳಿದರು. ಚುನಾವಣಾ ಆಯೋಗವು ಈ ವಿಷಯವನ್ನು ಗಮನಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಾವು ಆಯೋಗಕ್ಕೆ ಕೇಳಿದ 12 ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ, ಆ ಬಗ್ಗೆಯೂ ವಿಕಪಕ್ಷಗಳು ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More