AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರಿಗೆ ನೋಟಿಸ್ ಸಾಧ್ಯತೆ

ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರಿಗೆ ನೋಟಿಸ್ ಸಾಧ್ಯತೆ

ಗಣಪತಿ ಶರ್ಮಾ
|

Updated on: Aug 24, 2026 | 7:16 AM

Share

ರಾಜ್ಯದಲ್ಲಿ ಇಂದು ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ನೇತೃತ್ವದಲ್ಲಿ ಪ್ರಕಟಿಸಲಾಗುತ್ತಿದೆ. ಪಟ್ಟಿಯಿಂದ ಹೆಸರು ಕಾಣೆಯಾದ ಅಥವಾ ಸೇರಿರುವ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ನೋಟಿಸ್ ನೀಡಲಿದ್ದಾರೆ. ಆಗಸ್ಟ್ 27 ರಿಂದ ನೋಟಿಸ್ ನೀಡಲು ಸಿದ್ಧತೆ ನಡೆದಿದ್ದು, ಆಕ್ಷೇಪಣೆ ಮತ್ತು ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು, ಆಗಸ್ಟ್ 24: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಂಗವಾಗಿ ಮೊದಲ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ನೇತೃತ್ವದಲ್ಲಿ ಈ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿದಿದ್ದಾರೆ ಮತ್ತು ಯಾರು ಇರುವುದಿಲ್ಲ ಎಂಬುದು ಬಹಿರಂಗಗೊಳ್ಳಲಿದೆ.

ಕರಡು ಪಟ್ಟಿ ಪ್ರಕಟವಾದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ನೀಡಿದೆ. ಇದರ ಒಂದು ಭಾಗವಾಗಿ, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ನೋಟಿಸ್ ನೀಡಲಿದ್ದಾರೆ. EROಗಳು ಮತದಾರರ ಮನೆಗಳಿಗೆ ತೆರಳಿ ನೋಟಿಸ್‌ಗಳನ್ನು ಹಸ್ತಾಂತರಿಸಲಿದ್ದಾರೆ. ಈಗಾಗಲೇ ಡಿಜಿಟಲೀಕರಣಗೊಂಡ 4.44 ಕೋಟಿ ಮತದಾರರ ಪೈಕಿ ಸುಮಾರು 43,80,740 ಮತದಾರರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ. ಆಗಸ್ಟ್ 27ರಿಂದ ಮತದಾರರಿಗೆ ನೋಟಿಸ್ ನೀಡಲು ಆಯೋಗ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸಹಕಾರಿಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us