AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SIR Row: ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ

Karnataka SIR Row: ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ

ಭಾವನಾ ಹೆಗಡೆ
|

Updated on: Jul 04, 2026 | 2:45 PM

Share

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ. ಸಾಮೂಹಿಕವಾಗಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗುತ್ತಿದೆ, ಇದು ಎಸ್ಐಆರ್ ಮಾಡುವ ಸರಿಯಾದ ವಿಧಾನವಲ್ಲ ಎಂದು ಅವರು ತಿಳಿಸಿದ್ದಾರೆ. ವಾರ್ಡ್ ನಂಬರ್ 69, ಬೂತ್ ನಂಬರ್ 116 ರಲ್ಲಿ ಮೂರು ಕುಟುಂಬಗಳಿಗೆ 50 ಫಾರ್ಮ್‌ಗಳನ್ನು ನೀಡಿರುವಂತಹ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ಬಿಎಲ್ಎಗಳು ಆಕ್ಷೇಪಿಸಿದಾಗಲೂ ಕ್ರಮ ಕೈಗೊಂಡಿಲ್ಲ ಎಂದು ಜೋಶಿ ದೂರಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೃತರು, ಸ್ಥಳಾಂತರಗೊಂಡವರು ಮತ್ತು ಅಕ್ರಮ ವಲಸಿಗರನ್ನು ಗುರುತಿಸಲು ಎಸ್ಐಆರ್ ಮಾಡಬೇಕೇ ಹೊರತು ಸಾಮೂಹಿಕವಾಗಿ ಫಾರ್ಮ್ ಭರ್ತಿ ಮಾಡುವುದಕ್ಕಲ್ಲ ಎಂದು ಅವರು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಬಗ್ಗೆ ಬಿಜೆಪಿ ಪ್ರಮುಖರೊಂದಿಗೆ ಚರ್ಚಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬೆಂಗಳೂರು, ಜುಲೈ 04: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ. ಸಾಮೂಹಿಕವಾಗಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗುತ್ತಿದೆ, ಇದು ಎಸ್ಐಆರ್ ಮಾಡುವ ಸರಿಯಾದ ವಿಧಾನವಲ್ಲ ಎಂದು ಅವರು ತಿಳಿಸಿದ್ದಾರೆ. ವಾರ್ಡ್ ನಂಬರ್ 69, ಬೂತ್ ನಂಬರ್ 116 ರಲ್ಲಿ ಮೂರು ಕುಟುಂಬಗಳಿಗೆ 50 ಫಾರ್ಮ್‌ಗಳನ್ನು ನೀಡಿರುವಂತಹ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ಬಿಎಲ್ಎಗಳು ಆಕ್ಷೇಪಿಸಿದಾಗಲೂ ಕ್ರಮ ಕೈಗೊಂಡಿಲ್ಲ ಎಂದು ಜೋಶಿ ದೂರಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೃತರು, ಸ್ಥಳಾಂತರಗೊಂಡವರು ಮತ್ತು ಅಕ್ರಮ ವಲಸಿಗರನ್ನು ಗುರುತಿಸಲು ಎಸ್ಐಆರ್ ಮಾಡಬೇಕೇ ಹೊರತು ಸಾಮೂಹಿಕವಾಗಿ ಫಾರ್ಮ್ ಭರ್ತಿ ಮಾಡುವುದಕ್ಕಲ್ಲ ಎಂದು ಅವರು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಬಗ್ಗೆ ಬಿಜೆಪಿ ಪ್ರಮುಖರೊಂದಿಗೆ ಚರ್ಚಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us