ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್​​ ಆಪರೇಷನ್ ಸಂಚಲನ

Updated on: Oct 07, 2026 | 3:15 PM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಾಸಗಿ ಸ್ಟಿಂಗ್ ಅಪರೇಷನ್​ ಕುರಿತು ಸಂಪುಟ ಸಚಿವರಿಗೆ ಸ್ಫೋಟಕ ಮಾಹಿತಿ ನೀಡಿ ಅಲರ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು....ನಿನ್ನೆ ಅಕ್ಟೋಬರ್ 06) ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಟಿಂಗ್ ಆಪರೇಷನ್ ಪಾಠ ಮಾಡಿದ ಡಿಕೆ ಶಿವಕುಮಾರ್, ಖಾಸಗಿ ಸಂಸ್ಥೆಗಳಿಂದ ಸಚಿವರ ಸ್ಟಿಂಗ್ ಆಪರೇಷನ್ ನಡೀತಿದೆ. ನಿಮ್ಮ ನಡೆ , ನುಡಿ ಎಲ್ಲವೂ ಜಾಗೃತವಾಗಿರಬೇಕು ಎಂದು ಸಚಿವರನ್ನ ಎಚ್ಚರಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 07): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಾಸಗಿ ಸ್ಟಿಂಗ್ ಅಪರೇಷನ್​ ಕುರಿತು ಸಂಪುಟ ಸಚಿವರಿಗೆ ಸ್ಫೋಟಕ ಮಾಹಿತಿ ನೀಡಿ ಅಲರ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು….ನಿನ್ನೆ ಅಕ್ಟೋಬರ್ 06) ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಟಿಂಗ್ ಆಪರೇಷನ್ ಪಾಠ ಮಾಡಿದ ಡಿಕೆ ಶಿವಕುಮಾರ್, ಖಾಸಗಿ ಸಂಸ್ಥೆಗಳಿಂದ ಸಚಿವರ ಸ್ಟಿಂಗ್ ಆಪರೇಷನ್ ನಡೀತಿದೆ. ನಿಮ್ಮ ನಡೆ , ನುಡಿ ಎಲ್ಲವೂ ಜಾಗೃತವಾಗಿರಬೇಕು ಎಂದು ಸಚಿವರನ್ನ ಎಚ್ಚರಿಸಿದ್ದಾರೆ.

ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಸಿಎಂ ಈ ಬಗ್ಗೆ ಮಾತಾಡಿದ್ದು, ಸರ್ಕಾರಕ್ಕೆ ಕಪ್ಪು ಮಸಿ ಬಳಿಯಲು ನಾನಾ ರೀತಿಯಲ್ಲಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಎಲ್ಲರೂ ಹುಷಾರಾಗಿರಿ ಎಂದಿದ್ದಾರೆ. ಅಷ್ಟೇ ಅಲ್ಲದೇ ಫೋನ್​ನಲ್ಲಿ ಮಾತಾಡುವಾಗ ಹೆಚ್ಚು ಅಲರ್ಟ್ ಆಗಿರುವಂತೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಪಿಎಗಳು, ಪಿಎಸ್ ಗಳು, ಆಪ್ತ ಸಿಬ್ಬಂದಿಗಳಿಗೂ ಎಚ್ಚರಿಕೆಯಿಂದಿರುವಂತೆ ಸೂಚಿಸುವಂತೆ ಸಿಎಂ ಸಲಹೆ ನೀಡಿದ್ದಾರೆ. ಸ್ಟಿಂಗ್ ಅಪರೇಷನ್ ಸುಳಿವು ಪಡೆದ ಸಚಿವರು ಈಗ ಫುಲ್ ಅಲರ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಸ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 07, 2026 03:12 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More