ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್ಐಆರ್ಗೆ ಚಾಲನೆ!
ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಸಿಎಂ ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು, ಭರ್ತಿ ಮಾಡಿದ ಸಿಎಂ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಮತದಾರರಿಗೆ ಪ್ರೇರಣೆ ನೀಡಿದ್ದಾರೆ. ಈ ವೇಳೆ ಸಿಎಂ ಅವರ ತವರೂರು ಕನಕಪುರ ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಉಪಸ್ಥಿತರಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 30, 2026 12:06 PM
Follow Us
