AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್

SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Apr 23, 2026 | 4:02 PM

Share

ಶಿರಸಿಯ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್, ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಎಡವಟ್ಟು ಎದುರಿಸಿದ್ದಾರೆ. ಆರು ವಿಷಯಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದರೂ, ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಲಾಗಿದೆ. ಆಡಿಯೋ ರೆಕಾರ್ಡಿಂಗ್‌ಗಳ ಮೂಲಕ ಶ್ರಮವಹಿಸಿ ಓದಿದ್ದ ಲೀಸಾ, ಶಿಕ್ಷಣ ಇಲಾಖೆಯ ಈ ತಪ್ಪಿನ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಕಾರವಾರ, ಏಪ್ರಿಲ್​ 23: ಇತ್ತೀಚೆಗೆ ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿತ್ತು. ಇದೀಗ ಇಂತಹದೊಂದು ಎಡವಟ್ಟು ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲೂ ನಡೆದಿದ್ದು, ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯನ್ನ ಫೇಲ್​ ಮಾಡಲಾಗಿದೆ. ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗೆ ಹಾಜರಾಗಿದ್ದರು ಸಮಾಜ-ವಿಜ್ಞಾನ ವಿಷಯದ ಪರೀಕ್ಷೆಗೆ ಗೈರು ಎಂದು ನಮೋದಿಸಲಾಗಿದೆ. ಕನ್ನಡ -100, ಇಂಗ್ಲಿಷ್​​ -92, ಅರ್ಥಶಾಸ್ತ್ರ-98 , ಪೊಲಿಟಿಕಲ್ ಸೈನ್ಸ್ -92, ಒಟ್ಟು-526 ಅಂಕ ಗಳಿಸುವ ಮೂಲಕ 84.16 % ಫಲಿತಾಂಶ ಪಡೆದಿದ್ದಾರೆ. ಆದರೆ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಫೇಲ್ ಎಂದು ರಿಸಲ್ಟ್‌ ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More