SSLC ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ದತ್ತು ಪಡೆದ ವಿದ್ಯಾರ್ಥಿಗಳ ಮೇಲುಗೈ; ಸನ್ಮಾನ ಮಾಡಿ ಶುಭ ಹಾರೈಕೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 09, 2024 | 2:41 PM

ಚಿಕ್ಕಬಳ್ಳಾಪುರ (Chikkaballapur) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pradeep Eshwar) ರವರು ದತ್ತು ಪಡೆದಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿದ್ದು, ಖುದ್ದು ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸಿದ್ದಾರೆ. ಈ ವೇಳೆ ಅವರ ಮೇಲೆ ಪುಷ್ಪ ಹಾಕಿ ಅದ್ದೂರಿ ಸ್ವಾಗತ ಮಾಡಿದರು.

ಚಿಕ್ಕಬಳ್ಳಾಪುರ, ಮೇ.09: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ(SSLC  Result)  ಹಿನ್ನಲೆ ಚಿಕ್ಕಬಳ್ಳಾಪುರ (Chikkaballapur) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pradeep Eshwar) ರವರು ದತ್ತು ಪಡೆದಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿದ್ದು, ಖುದ್ದು ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸಿದ್ದಾರೆ. ಈ ವೇಳೆ ಅವರ ಮೇಲೆ ಪುಷ್ಪ ಹಾಕಿ ಅದ್ದೂರಿ ಸ್ವಾಗತ ಮಾಡಿದರು. ಇನ್ನು ಚಿಕ್ಕಬಳ್ಳಾಪುರ ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಶುಭ ಹಾರೈಸಿದರು. ಸೂಪರ್ ಸಿಕ್ಸಟಿ ಹೆಸರಿನಲ್ಲಿ ಶಾಸಕ ಪ್ರದೀಪ್ ಈಶ್ವರ್ 60 ಜನ ಬಡ ನಿರ್ಗತಿಕ ಎಸ್.ಎಸ್.ಎಲ್.ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಉಚಿತ ಕೋಚಿಂಗ್ ನೀಡುವುದರ ಮೂಲಕ ಸಹಾಯ ಹಸ್ತಾ ಚಾಚಿದ್ದರು. ಈ ಕುರಿತು ನಮ್ಮ ಪ್ರತಿನಿಧಿ  ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ವಿದ್ಯಾರ್ಥಿಗಳ ಜೊತೆ ಮಾತನಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 09, 2024 02:39 PM