AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

Vinay Kashappanavar
| Edited By: |

Updated on:Apr 22, 2026 | 9:39 PM

Share

ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿ ಫಲಿತಾಂಶವನ್ನು ಘೋಷಿಸಲಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ವಿವರಗಳನ್ನು ಫಲಿತಾಂಶ ಪ್ರಕಟಣೆ ವೇಳೆ ನೀಡಲಾಗುವುದು.

ಬೆಂಗಳೂರು, ಏಪ್ರಿಲ್​ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ ಮೌಲ್ಯಮಾಪನ ಮಾಡಲಾಗಿದೆ. ಹೀಗಾಗಿ ನಾಳೆ ಅಂಕಗಳನ್ನೇ ನೀಡಲು ಇಲಾಖೆ ಮುಂದಾಗಿದೆ ಎಂದು ಅವರು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 22, 2026 09:38 PM
Follow Us