AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸ್ಟಿಂಗ್ ವಿವಾದ: ಕಾಂಗ್ರೆಸ್ ಹೈಕಮಾಂಡ್ ತಲುಪಿದ ವಿಚಾರ, ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ

ಕರ್ನಾಟಕ ಸ್ಟಿಂಗ್ ವಿವಾದ: ಕಾಂಗ್ರೆಸ್ ಹೈಕಮಾಂಡ್ ತಲುಪಿದ ವಿಚಾರ, ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ

ಪ್ರಸನ್ನ ಗಾಂವ್ಕರ್​
| Edited By: |

Updated on:Oct 13, 2026 | 10:39 AM

Share

ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ವಿಚಾರ ಕಾಂಗ್ರೆಸ್ ಹೈಕಮಾಂಡ್ ತನಕ ತಲುಪಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಗಮನಕ್ಕೆ ಯತೀಂದ್ರ ಈ ವಿಷಯ ತಂದಿದ್ದು, ವೈಯಕ್ತಿಕವಾಗಿ ಚರ್ಚಿಸಬೇಕಾದ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿದ ಸಮಯದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರು, ಅಕ್ಟೋಬರ್ 13: ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ವಿವಾದ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ವೈಯಕ್ತಿಕವಾಗಿ ಚರ್ಚಿಸಬೇಕಾದ ಅಥವಾ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಬೇಕಾದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆಗೆ ತಂದ ಸಮಯದ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.

ಸಚಿವ ಯತೀಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಈ ಸ್ಟಿಂಗ್ ವಿಚಾರವನ್ನು ಅವರ ಗಮನಕ್ಕೆ ತಂದಾಗ, ಖರ್ಗೆಯವರು ವಿಷಯ ಮಂಡಿಸಿದ ರೀತಿಯ ಬಗ್ಗೆ ಗರಂ ಆಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಏಳೆಂಟು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಈ ಸ್ಟಿಂಗ್ ಆಪರೇಷನ್ ಕುರಿತು ಹಲ್​ಚಲ್ ಸೃಷ್ಟಿಯಾಗಿದ್ದು, ರಾಜಕಾರಣಿಗಳ ಘನತೆಗೆ ಕುಂದುಂಟಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕ್ಯಾಬಿನೆಟ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರಿಂದ ಅದರ ಗಂಭೀರತೆ ಮತ್ತಷ್ಟು ಹೆಚ್ಚಿದೆ. ಅಲ್ಲದೆ, ವಿಚಾರ ಪ್ರಸ್ತಾಪಿಸಿದ ಸಮಯ, ಸಂದರ್ಭದ ಬಗ್ಗೆಯೂ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 13, 2026 10:34 AM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More