ಕರ್ನಾಟಕ ಸ್ಟಿಂಗ್ ವಿವಾದ: ಕಾಂಗ್ರೆಸ್ ಹೈಕಮಾಂಡ್ ತಲುಪಿದ ವಿಚಾರ, ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ವಿಚಾರ ಕಾಂಗ್ರೆಸ್ ಹೈಕಮಾಂಡ್ ತನಕ ತಲುಪಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಗಮನಕ್ಕೆ ಯತೀಂದ್ರ ಈ ವಿಷಯ ತಂದಿದ್ದು, ವೈಯಕ್ತಿಕವಾಗಿ ಚರ್ಚಿಸಬೇಕಾದ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿದ ಸಮಯದ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಬೆಂಗಳೂರು, ಅಕ್ಟೋಬರ್ 13: ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ವಿವಾದ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ವೈಯಕ್ತಿಕವಾಗಿ ಚರ್ಚಿಸಬೇಕಾದ ಅಥವಾ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಬೇಕಾದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆಗೆ ತಂದ ಸಮಯದ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ.
ಸಚಿವ ಯತೀಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಈ ಸ್ಟಿಂಗ್ ವಿಚಾರವನ್ನು ಅವರ ಗಮನಕ್ಕೆ ತಂದಾಗ, ಖರ್ಗೆಯವರು ವಿಷಯ ಮಂಡಿಸಿದ ರೀತಿಯ ಬಗ್ಗೆ ಗರಂ ಆಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಏಳೆಂಟು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಈ ಸ್ಟಿಂಗ್ ಆಪರೇಷನ್ ಕುರಿತು ಹಲ್ಚಲ್ ಸೃಷ್ಟಿಯಾಗಿದ್ದು, ರಾಜಕಾರಣಿಗಳ ಘನತೆಗೆ ಕುಂದುಂಟಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕ್ಯಾಬಿನೆಟ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರಿಂದ ಅದರ ಗಂಭೀರತೆ ಮತ್ತಷ್ಟು ಹೆಚ್ಚಿದೆ. ಅಲ್ಲದೆ, ವಿಚಾರ ಪ್ರಸ್ತಾಪಿಸಿದ ಸಮಯ, ಸಂದರ್ಭದ ಬಗ್ಗೆಯೂ ಹೈಕಮಾಂಡ್ ಗರಂ ಆಗಿದೆ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
