ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ: ವೇಣುಗೋಪಾಲ್​ಗೆ ಮಾಹಿತಿ ನೀಡಿದ್ದೇನೆ ಎಂದ ಪ್ರಿಯಾಂಕ್ ಖರ್ಗೆ

Edited By:

Updated on: Oct 23, 2026 | 10:37 AM

ಕರ್ನಾಟಕದ ಸ್ಟಿಂಗ್ ಆಪರೇಷನ್ ವಿವಾದ ಈಗ ದೆಹಲಿ ಅಂಗಳ ತಲುಪಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಟಿಂಗ್ ಕುರಿತು ಚರ್ಚಿಸಿಲ್ಲ ಎಂದರೂ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಸಿ ವೇಣುಗೋಪಾಲ್ ಅವರಿಗೆ ಎಲ್ಲ ವಿವರ ನೀಡಿದ್ದಾಗಿ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಹ ಅಮಿತ್ ಶಾ ಭೇಟಿಯಾಗಿ ವಿಷಯ ತಿಳಿಸುವುದಾಗಿ ಹೇಳಿದ್ದು, ಬರ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ಸ್ಟಿಂಗ್ ವಿವಾದವು ಮರೆಮಾಚಿದೆ.

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ದೆಹಲಿ ಅಂಗಳವನ್ನು ತಲುಪಿದೆ. ರಾಜ್ಯ ನಾಯಕರು ಕೇಂದ್ರದ ನಾಯಕರನ್ನು ಭೇಟಿ ಮಾಡಿದ್ದು, ಈ ಸ್ಟಿಂಗ್ ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದ ನಂತರ, ಸ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಇದಕ್ಕೆ ವಿರುದ್ಧವಾಗಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆ.ಸಿ. ವೇಣುಗೋಪಾಲ್ ಅವರಿಗೆ ಸ್ಟಿಂಗ್ ಆಪರೇಷನ್ ಕುರಿತ ಎಲ್ಲ ವಿವರಗಳನ್ನು ನೀಡಿರುವುದಾಗಿ ಖಚಿತಪಡಿಸಿದ್ದಾರೆ. ಸ್ಟಿಂಗ್ ವಿವಾದ ಆರಂಭವಾದ ನಂತರ ನಡೆದ ಮೊದಲ ಭೇಟಿಯಲ್ಲಿ ಗೃಹ ಸಚಿವರು ಮಾಹಿತಿ ನೀಡಿರುವುದು ಕುತೂಹಲ ಮೂಡಿಸಿದೆ.

ಇದೇ ವೇಳೆ, ವಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿಯಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ನಾಗೇಂದ್ರ ರಾಜೀನಾಮೆ, ಸ್ಟಿಂಗ್ ಮಾಡಿದವರು ಯಾರು, ಮಾಡಿಸಿದವರು ಯಾರು ಎಂಬೆಲ್ಲಾ ಮಾಹಿತಿಗಳನ್ನು ಶಾ ಅವರಿಗೆ ನೀಡುತ್ತೇನೆ ಎಂದು ಅಶೋಕ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More