ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಸಿಸಿಬಿ ತನಿಖೆ ತೀವ್ರ: ಹಿರಿಯ ಪತ್ರಕರ್ತನ ವಿಚಾರಣೆ
ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಅಧಿಕಾರಿಗಳು, ಇದೀಗ ಹಿರಿಯ ಪತ್ರಕರ್ತರೋರ್ವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ನೋಟಿಸ್ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು, ಅಕ್ಟೋಬರ್ 23: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇತ್ತೀಚೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆ ಬೆನ್ನಲ್ಲೇ ಇದೀಗ ಓರ್ವ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿಕ ಪತ್ರಕರ್ತನಿಗೆ ನೋಟಿಸ್ ಕೊಟ್ಟು ಕಳುಹಿಸಲಾಗಿದ್ದು, ನೋಟಿಸ್ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಪತ್ರಕರ್ತ ಅರ್ಜಿ ಹಾಕಿದ್ದಾರೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 23, 2026 11:16 AM
Follow Us

